ವಿವೇಕ ಚೂಡಾಮಣಿ -ಭಾಗ ೪
ಗ್ರಂಥದ ಮುಂದುವರಿದ ಭಾಗ. ॥दुर्लभं त्रयमेवैतद् दैवानुग्रहहेतुकम्। मनुष्यत्वं मुमुक्षुत्वम् महापुरुषसंश्र्यः ॥३|| ||ದುರ್ಲಭಂ ತ್ರಯಮೇವೈತದ್ ದೈವಾನುಗ್ರಹ ಹೇತುಕಮ್ | ಮನುಷ್ಯತ್ವಂ ಮುಮುಕ್ಷುತ್ವಂ ಮಹಾಪುರುಷಸಂಶ್ರಯಃ || ೩|| ಈ ಲೋಕದಲ್ಲಿ ಸುಲಭವಾಗಿ ದೊರಕದ (ದುರ್ಲಭವಾದ) ವಿಷಯಗಳನ್ನು ತಿಳಿಸುತ್ತಾ ಶ್ರೀ ಶಂಕರರು ಇನ್ನೂ ಮಹತ್ತರವಾದ ವಿಚಾರವನ್ನು ಪ್ರಸ್ತಾವಿಸುತ್ತಾರೆ. ಮೇಲಿನ ಶ್ಲೋಕದ ಮೊದಲನೆಯ ಸಾಲನ್ನು ಗಮನಿಸೋಣ ದುರ್ಲಭಂ ತ್ರಯಮೈವತದ್ ದೈವಾನುಗ್ರಹ ಹೇತುಕಮ್ (ದುರ್ಲಭಂ =ಸುಲಭವಾಗಿ ದೊರಕದ, ತ್ರಯಮ್ =ಮೂರು, ದೈವಾನುಗ್ರಹ ಹೇತುಕಮ್ = ದೈವಾನುಗ್ರಹವೇ ಕಾರಣವಾಗಿರುವ ) ದೈವಾನುಗ್ರಹವೇ ಕಾರಣವಾಗಿರುವ ಮೂರು ಮುಖ್ಯ ದುರ್ಲಭವಾದ ಸಂಗತಿಗಳಿವೆ . ಆ ಸಂಗತಿಗಳನ್ನು ಶ್ಲೋಕದ ಎರಡನೆಯ ಸಾಲಿನಲ್ಲಿ ಹೇಳಲಾಗಿದೆ. ಆ ಎರಡನೆಯ ಸಾಲಿನ ಮೊದಲನೆಯ ಸಂಗತಿಯನ್ನು ಗಮನಿಸೋಣ. ೧) ಮನುಷ್ಯತ್ವಮ್ (= ಮನುಜನಾಗಿರುವುದು) ಮಾನವ ಜೀವಿಯು 'ಮನುಷ್ಯ' ಎನಿಸಿಕೊಳ್ಳಲು ಆತನಿಗಿರಬೇಕಾದ ಕನಿಷ್ಠ ಅರ್ಹತೆಯೆಂದರೆ ಅದು ಮನುಷ್ಯತ್ವ !. ಕಾಡು ಪ್ರಾಣಿಗಳ ಗುಣವು ನಾಗರೀಕ ಮಾನವನ ಗುಣವಲ್ಲ. ಈ ಮೊದಲು ಹೇಳಿದಂತೆ ಮಾನವನಿಗೆ ಹೆಚ್ಚಿನ ಗುಣಗಳು ಸಂದಾಯವಾಗಿ ಬಂದಿದ್ದರೆ ಕೆಲವೊಂದನ್ನು ಸಂಪಾದಿಸಿಕೊಳ್ಳಬೇಕಾಗುತ್ತದೆ. ಗುಣ ಸಂಪಾದನೆಗೆ ಸ್ವಾನುಭವವೂ ದಾರಿಯಾಗಬಲ್ಲುದು ವೇದಾಂತಗಳ...