ಪೋಸ್ಟ್‌ಗಳು

ಜುಲೈ, 2011 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ವಿವೇಕ ಚೂಡಾಮಣಿ -ಭಾಗ ೪

ಗ್ರಂಥದ ಮುಂದುವರಿದ ಭಾಗ. ॥दुर्लभं त्रयमेवैतद् दैवानुग्रहहेतुकम्। मनुष्यत्वं मुमुक्षुत्वम् महापुरुषसंश्र्यः ॥३||  ||ದುರ್ಲಭಂ ತ್ರಯಮೇವೈತದ್ ದೈವಾನುಗ್ರಹ ಹೇತುಕಮ್ |   ಮನುಷ್ಯತ್ವಂ ಮುಮುಕ್ಷುತ್ವಂ ಮಹಾಪುರುಷಸಂಶ್ರಯಃ || ೩||    ಈ ಲೋಕದಲ್ಲಿ ಸುಲಭವಾಗಿ ದೊರಕದ (ದುರ್ಲಭವಾದ) ವಿಷಯಗಳನ್ನು ತಿಳಿಸುತ್ತಾ ಶ್ರೀ ಶಂಕರರು ಇನ್ನೂ ಮಹತ್ತರವಾದ ವಿಚಾರವನ್ನು ಪ್ರಸ್ತಾವಿಸುತ್ತಾರೆ. ಮೇಲಿನ ಶ್ಲೋಕದ ಮೊದಲನೆಯ ಸಾಲನ್ನು ಗಮನಿಸೋಣ ದುರ್ಲಭಂ ತ್ರಯಮೈವತದ್ ದೈವಾನುಗ್ರಹ ಹೇತುಕಮ್  (ದುರ್ಲಭಂ =ಸುಲಭವಾಗಿ ದೊರಕದ, ತ್ರಯಮ್ =ಮೂರು, ದೈವಾನುಗ್ರಹ ಹೇತುಕಮ್ = ದೈವಾನುಗ್ರಹವೇ ಕಾರಣವಾಗಿರುವ ) ದೈವಾನುಗ್ರಹವೇ ಕಾರಣವಾಗಿರುವ ಮೂರು ಮುಖ್ಯ ದುರ್ಲಭವಾದ ಸಂಗತಿಗಳಿವೆ .  ಆ ಸಂಗತಿಗಳನ್ನು ಶ್ಲೋಕದ ಎರಡನೆಯ ಸಾಲಿನಲ್ಲಿ ಹೇಳಲಾಗಿದೆ. ಆ ಎರಡನೆಯ ಸಾಲಿನ ಮೊದಲನೆಯ ಸಂಗತಿಯನ್ನು ಗಮನಿಸೋಣ. ೧) ಮನುಷ್ಯತ್ವಮ್ (= ಮನುಜನಾಗಿರುವುದು) ಮಾನವ ಜೀವಿಯು 'ಮನುಷ್ಯ' ಎನಿಸಿಕೊಳ್ಳಲು ಆತನಿಗಿರಬೇಕಾದ ಕನಿಷ್ಠ ಅರ್ಹತೆಯೆಂದರೆ ಅದು ಮನುಷ್ಯತ್ವ !. ಕಾಡು ಪ್ರಾಣಿಗಳ ಗುಣವು ನಾಗರೀಕ ಮಾನವನ ಗುಣವಲ್ಲ. ಈ ಮೊದಲು ಹೇಳಿದಂತೆ ಮಾನವನಿಗೆ ಹೆಚ್ಚಿನ ಗುಣಗಳು ಸಂದಾಯವಾಗಿ ಬಂದಿದ್ದರೆ ಕೆಲವೊಂದನ್ನು ಸಂಪಾದಿಸಿಕೊಳ್ಳಬೇಕಾಗುತ್ತದೆ. ಗುಣ ಸಂಪಾದನೆಗೆ ಸ್ವಾನುಭವವೂ ದಾರಿಯಾಗಬಲ್ಲುದು ವೇದಾಂತಗಳ ಅರಿವೂ ಬೆಳಕಾಗಬಲ್ಲುದು.

ವಿವೇಕ ಚೂಡಾಮಣಿ -ಭಾಗ ೩

ಪ್ರಕರಣ ಗ್ರಂಥದ ಆರಂಭ --------------------- जन्तूनां नरजन्म दुर्लभमतः पुंस्त्वं ततो विप्रता तस्माद्   वैदिकधर्ममार्गपरता विद्वत्वमस्मात् परम् । आत्मानात्मविवेचनं स्वनुभवो ब्रह्मात्मना संस्थितिः मुक्तिर्नो शतकोटिजन्मसु कृतैः पुण्यैर्विना लभ्यते ॥२॥ ಜಂತೂನಾಂ ನರಜನ್ಮ ದುರ್ಲಭಮತಃ ಪುಂಸ್ತ್ವಂ ತತೋ ವಿಪ್ರತಾ ತಸ್ಮಾದ್ವೈದಿಕ ಧರ್ಮಮಾರ್ಗಪರತಾ ವಿದ್ವತ್ವಮಸ್ಮಾತ್ ಪರಮ್ | ಆತ್ಮಾನಾತ್ಮವಿವೇಚನಂ ಸ್ವನುಭವೋ ಬ್ರಹ್ಮಾತ್ಮನಾ ಸಂಸ್ಥಿತಿಃ ಮುಕ್ತಿರ್ನೋ ಶತಕೋಟಿ ಜನ್ಮ ಸುಕೃತೈಃ ಪುಣ್ಯೈರ್ವಿನಾಲಭ್ಯತೇ ||೨|| ಗ್ರಂಥದ ಆರಂಭ ಶ್ಲೋಕವೇ ಚರ್ಚೆಗೀಡುಮಾಡುವಂತಹುದಾಗಿದೆ. ಸರಳವಾಗಿ ಈ ಸೂಕ್ತದ ಭಾವಾರ್ಥವನ್ನು ತಿಳಿಯುವುದಾದರೆ "ಪ್ರಾಣಿಗಳಿಗೆ ಮಾನವ ಜನ್ಮವು ದುರ್ಲಭ. ಅದರಲ್ಲಿ ಪುರುಷತ್ವ, ವಿಪ್ರತ್ವ, ಧರ್ಮಮಾರ್ಗ ಪರತ್ವ ಮತ್ತು ಶಾಸ್ತ್ರಾರ್ಥ ಜ್ಞಾನವು ಒಂದಕ್ಕಿಂತ ಒಂದು ಮಿಗಿಲಾದವುಗಳು ಮತ್ತು ಬೇಕೆಂದಾಗ ಸಿಗದಿರುವಂತಹವು. ಅದರಲ್ಲೂ ಅಳಿವು-ಉಳಿವುಗಳ ಅರಿವನ್ನು ತಿಳಿದು ಆತ್ಮಜ್ಞಾನವನ್ನು ಪಡೆಯುವುದು ಇನ್ನೂ ಮಿಗಿಲಾದುದು. ಇವೆಲ್ಲವೂ ನೂರುಕೋಟಿ ಜನ್ಮಗಳಲ್ಲಿ ಸಂಪಾದಿಸಿದ ಪುಣ್ಯಗಳಿಲ್ಲದೆ ದೊರೆಯಲಾರದು " . ದೊರಕದು ಮಾನವಜನ್ಮವದರೊಳು ದೊರಕದು ಪುರುಷತ್ವವು ಸಿಗದು ವಿಪ್ರತ್ವವದಕಿಂತ ಮಿಗಿಲು ಧರ್ಮದಾಯಿತ್ವವವು ದೊರಕದು ದಿಟದ ಮೇಲರಿಮೆ ತನ್ನ ತಾನರಿಯದೆ ಮು

ವಿವೇಕ ಚೂಡಾಮಣಿ - ಭಾಗ ೨

ಶ್ರೀ ಶಂಕರಾಚಾರ್ಯರ ಹಲವು ಪ್ರಕರಣ ಗ್ರಂಥಗಳಲ್ಲಿ ವಿವೇಕ ಚೂಡಮಣಿಯು ಅತ್ಯಂತ ವಿಶಿಷ್ಟವಾದುದಾಗಿದೆ. ಆರಂಭದಿಂದ ಅಂತ್ಯದವರೆವಿಗೂ ಎಲ್ಲಿಯೂ ದಿಕ್ಕು ತಪ್ಪದೆ ವೇದೋಪನಿಷತ್ತುಗಳ ಸಾರವನ್ನು ತುಂಬಾ ಸರಳವಾದ ಭಾಷೆಯಲ್ಲಿ ತಿಳಿಸುತ್ತಾ ನಿರ್ದಿಷ್ಟವಾದ ಗುರಿಯನ್ನು ಮುಟ್ಟುತ್ತದೆ. ರಾಜಕಾರಣಿಗಳ ಭಾಷಣದಂತೆ ಎಲ್ಲೋ ಆರಂಭವಾಗಿ ಮತ್ತೆಲ್ಲೋ ಮುಗಿಯುವಂತಾಗದೆ, ಆತ್ಮ ಸಂಸ್ಕಾರದ ಅರಿವಿನಿಂದ ಆರಂಭವಾಗಿ ಮುಕ್ತಿಯೆಡೆಗೆ ಸಾಗುವ ದಾರಿಯ ವಿಚಾರಗಳು ಆಸಕ್ತರನ್ನು ಸಲೀಸಾಗಿ ಓದುವಂತೆ ಹಿಡಿದಿಡುತ್ತದೆ. ಇಂತಹ ಗ್ರಂಥಗಳ ವಿಚಾರಗಳನ್ನು ತಿಳಿಯುವುದು ಮತ್ತು ಅದನ್ನು ವರ್ತಮಾನಕ್ಕೆ ಅನ್ವಯವಾಗುವಂತೆ ವಿವರಿಸುವುದು ತುಸು ಕಷ್ಟವಾದರೂ, ವಿವೇಕ ಚೂಡಾಮಣಿಯಲ್ಲಿ ಬಳಸಿರುವ ಭಾಷೆಯ ಲಾಲಿತ್ಯ, ವಿಚಾರಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾಗುವಂತಯೇ ಇದೆ.  ಈಗಾಗಲೇ ಚೂಡಾಮಣಿಯ ಕನ್ನಡದ ವಿವರಣೆಗಳಿರುವ ಹಲವು ಪುಸ್ತಕಗಳು ಹೊರಬಂದಿದ್ದು, ಅದರಲ್ಲಿ ಪ್ರಮುಖವಾಗಿ ಶ್ರೀ ಚಂದ್ರಶೇಖರ ಭಾರತಿಗಳ ವ್ಯಾಖ್ಯಾನವನ್ನು ಮತ್ತು ಶ್ರೀ ಆರ್. ಗಣೇಶರ ಪ್ರವಚನ ಮಾಲಿಕೆಯನ್ನು ನನ್ನ ಅಧ್ಯಯನಕ್ಕೆ ಇಟ್ಟುಕೊಂಡಿದ್ದೇನೆ.  ಇಲ್ಲಿ ಬರುವ ವಿಚಾರಗಳು ಮತ್ತೆಲ್ಲೋ ಬಂದಿರಲೂಬಹುದು ಅಥವಾ ಬಂದಿಲ್ಲದೆಯೂ ಇರಬಹುದು, ಸಾಧ್ಯವಾದಷ್ಟು ಅಧ್ಯಯನಪರವಾದ ಹೊಸ ವಿಚಾರಗಳನ್ನು ಬರೆಯಲು ಯತ್ನಿಸುತ್ತೇನೆ.  ಸರಳ ಸಂಸ್ಕೃತ ಭಾಷೆಯಲ್ಲಿ ಸುಮಾರು ೫೮೧ ಸೂಕ್ತಿಗಳೊಂದಿಗೆ ಹಲವು ಅಲಂಕಾರಗಳನ್ನು ಬಳಸಿ ರಚಿತವಾಗಿರುವ ಈ ಗ

ವಿವೇಕ ಚೂಡಾಮಣಿ -ಭಾಗ ೧

ಇಮೇಜ್
ಈ ಜಗತ್ತಿಗೆ ಯಾರು ಅತ್ಯುತ್ತಮವಾದವುಗಳನ್ನು ಕೊಟ್ಟಿರುವರೋ ಅವರು ಎಲೆ ಮರೆಯ ಕಾಯಿಯಂತೆಯೇ ಇದ್ದು ಹೆಸರಿನ ,ಕೀರ್ತಿಯ ಆಸೆಯಾಗನ್ನಾಗಲೀ ಇಟ್ಟುಕೊಳ್ಳದೆ ಮಾನವಕೋಟಿಗೆ ಉತ್ತಮವಾದುದು ಉಳಿದರೆ ಸಾಕೆಂದು ಆಕಾರವಿಲ್ಲದ ಗಾಳಿ, ಬೆಳಕಿನಂತೆ ಆಗಿ ಹೋಗಿದ್ದಾರೆ. ಭಾರತೀಯ ಪುರಾತನ ತತ್ತ್ವಶಾಸ್ತ್ರದ ರಚನಕಾರರು, ಪುರಾತನ ಗುಡಿ-ಕೋಟೆಗಳನ್ನು ಕಟ್ಟಿದವರು, ನಾಗರೀಕ ಜೀವನಕ್ಕೆ ಮೇಲ್ಪಂಕ್ತಿ ಹಾಕಿಕೊಟ್ಟ ಅನೇಕ ಮಹಾಮಹಿಮರುಗಳ ಹೆಸರುಗಳು ನಮಗೆ ನಿಶ್ಚಿತವಾಗಿ ದೊರಕುವುದಿಲ್ಲ. ಭಾರತೀಯ ತತ್ತ್ವಶಾಸ್ತ್ರದ ಆಧಾರಸ್ತಂಭಗಳಾದ ವೇದೋಪನಿಷತ್ತುಗಳೂ ಸಹ ಇಂತಹ ಅನೇಕ ಅನಾಮಧೇಯ ದೃಷ್ಟಾರರಿಂದಲೇ ಬೆಳಕಿಗೆ ತೆರೆದುಕೊಂಡಿವೆ. ವೇದ-ವೇದಾಂಗಗಳು ಮಾನವನಿಂದ ರಚಿತವಾದವುಗಳಲ್ಲ (ಅಪೌರುಷೇಯ) ಎಂಬ ವಿಚಾರವಿದ್ದರೂ ಮಾನವಕೋಟಿಗೆ ವೇದೋಪನಿಷತ್ತುಗಳ ಸಾರವನ್ನು ತಿಳಿಸಿಕೊಟ್ಟ ಅನೇಕ ಜ್ಞಾನಿಗಳ-ಗುರುಗಳ ವಿವರಗಳು ತಿಳಿದುಬಂದಿಲ್ಲ. ಸೃಷ್ಟಿಯ ಅನೇಕ ವಿಚಿತ್ರಗಳನ್ನು ವೈವಿಧ್ಯಗಳನ್ನು ಸಾವಿರಾರು ವರುಷಗಳಷ್ಟು ಹಿಂದೆಯೇ ಕಂಡುಕೊಂಡು ಆ ಸತ್ಯಗಳನ್ನು ಉಪನಿಷತ್ತುಗಳ ಮೂಲಕ ತೆರೆದಿಟ್ಟ ಋಷಿಗಳನ್ನು, ಯಂತ್ರಗಳ ಸಹಾಯದಿಂದಲೇ ಬದುಕನ್ನು ಕಟ್ಟಿಕೊಂಡು ಜೀವಿಸುತ್ತಿರುವ ಮಾನವನೊಂದಿಗೆ ಹೋಲಿಸಬಹುದೇ ? . ಜಗತ್ತಿನ ಅತ್ಯಂತ ಬುದ್ಧಿವಂತ ಪ್ರಾಣಿಯಾದ ಮಾನವನು ಅನೇಕ ತಾಂತ್ರಿಕ-ವೈಜ್ಞಾನಿಕ ವಸ್ತು-ವಿಧಾನಗಳನ್ನು ಅನ್ವೇಶಿಸಿಕೊಂಡು ತನ್ನ ಬದುಕನ್ನು ನಾಜೂಕಿನ ಗರಡಿಯೊಳಗೆ ದೂಡಿ ಪಳಗಿ ಹೊರಬಂದು