ಭಾಗ ೨೨
मूलम्-ಮೂಲ विद्वान् स तस्मा उपसत्तिमीयुषे मुमुक्षवे साधु यथोक्तकारिणे। प्रशान्तचित्ताय शमान्विताय तत्वोपदेशं कृपयैव कुर्यात् ॥४३॥ ವಿದ್ವಾನ್ ಸ ತಸ್ಮಾ ಉಪಸತ್ತಿಮೀಯುಷೇ ಮುಮುಕ್ಷವೇ ಸಾಧು ಯಥೋಕ್ತಕಾರಿಣೇ | ಪ್ರಶಾಂತಚಿತ್ತಾಯ ಶಮಾನ್ವಿತಾಯ ತತ್ವೋಪದೇಶಂ ಕೃಪಯೈವ ಕುರ್ಯಾತ್ |೪೩ | ಪ್ರತಿಪದಾರ್ಥ :- (ಸಃ ವಿದ್ವಾನ್ = ಆ ವಿದ್ವಾಂಸನು, ಉಪಸತ್ತಿಮ್ ಈಯುಷೇ = ತಿಳಿವನ್ನು ಬಯಸಿರುವ, ಮುಮುಕ್ಷವೇ = ಮುಮುಕ್ಷವಾದ, ಸಾಧು-ಯಥೋಕ್ತ-ಕಾರಿಣೇ = ಹೇಳಿದಂತೆ ಸರಿಯಾಗಿ ನೆಡೆಯುವ(ಮಾಡುವ), ಪ್ರಶಾಂತ ಚಿತ್ತಾಯ = ನಿರ್ಮಲ ಮನಸ್ಕನಾದ, ಶಮಾನ್ವಿತಾಯ = ಶಮದಮಾದಿ ಗುಣಗಳಿಂದ ಸಂಪನ್ನನಾದ, ತಸ್ಮೈ = ಆ ಅಪೇಕ್ಷಿಗೆ, ಕೃಪಯಾ ಏವ = ಕರುಣೆಯಿಂದಲೇ, ತತ್ವೋಪದೇಶಂ -ಕುರ್ಯಾತ್ = ತತ್ವೋಪದೇಶವನ್ನು ಮಾಡಬೇಕು ) ತಾತ್ಪರ್ಯ:- ಬ್ರಹ್ಮಜ್ಞಾನಿಯಾದ ಗುರುವು ಉಪದೇಶವನ್ನು ಬಯಸುತ್ತಿರುವ, ಶಮಾದಿ ಗುಣಗಳಿಂದ ಕೂಡಿರುವ , ಹೇಳಿದಂತೆ ಸರಿಯಾಗಿ ನೆಡೆಯುವ, ಒಳ್ಳೆಯ ಮನಸಿನವನಾದ , ಮುಮುಕ್ಷವಾದ ಜ್ಞಾನಾಪೇಕ್ಷಿಗೆ ಕರುಣೆಯಿಂದ ಕೃಪೆತೋರಿ ತತ್ವೋಪದೇಶವನ್ನು ಮಾಡಬೇಕು. ವಿವರಣೆ :- ಜ್ಞಾನೋಪದೇಶವನ್ನು ಬಯಸಿ ಬರುವ ಅಪೇಕ್ಷಿಯನ್ನು ಕರುಣೆಯಿಂದ ಶಿಷ್ಯನನ್ನಾಗಿ ಸ್ವೀಕರಿಸಿ ಆತನಿಗೆ ತತ್ವೋಪದೇಶವನ್ನು ಬ್ರಹ್ಮವಿದನಾದ ಗುರುವು ಮಾಡಬೇಕು ಎಂದು ಆಚಾರ್ಯರು ಈ ಶ್ಲೋಕದಲ್ಲಿ ಹೇಳಿರುತ್ತಾರೆ. ಪ್ರಕರಣದಲ್ಲಿ ಬರುವ ವಿಚಾರಗಳು ಗುರು-