ಪೋಸ್ಟ್‌ಗಳು

ಫೆಬ್ರವರಿ, 2012 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಭಾಗ-೧೯

मूलम् - ಮೂಲ दुर्वारसंसारदवाग्नितप्तं दोधूयमानं दुरदृष्टवातैः । भीतं प्रसन्नं परिपाहि मृत्योः शरण्यमन्यं यदहं न जाने ॥३८॥ ದುರ್ವಾರ-ಸಂಸಾರ-ದವಾಗ್ನಿತಪ್ತಂ ದೋಧೂಯಮಾನಂ ದುರದೃಷ್ಟವಾತೈಃ | ಭೀತಂ ಪ್ರಪನ್ನಂ ಪರಿಪಾಹಿ ಮೃತ್ಯೋಃ ಶರಣ್ಯಮನ್ಯಂ ಯದಹಂ ನ ಜಾನೇ ||೩೭|| ಪ್ರತಿಪದಾರ್ಥ :  (ಯತ್ = ಯಾವ ಕಾರಣದಿಂದ, ಅಹಂ =ನಾನು, ಅನ್ಯಂ ಶರಣ್ಯಂ= ಬೇರೆ ಗುರುವನ್ನು(ಕಾಯುವವನನ್ನು) , ನ ಜಾನೇ=ಅರಿಯೆನೊ , (ಹೀಗಾಗಿ) ದುರ್ವಾರ-ಸಂಸಾರ-ದವಾಗ್ನಿತಪ್ತಂ = ಬಗೆಹರಿಸಲು ಆಗದಿರುವ ಬದುಕಿನ ಜಂಜಡಗಳೆಂಬ ಕಾಳ್ಗಿಚ್ಚಿನಿಂದ ಬೆಂದಿರುವ (ನೊಂದಿರುವ), ದುರದೃಷ್ಟವಾತೈಃ = ದುರದೃಷ್ಟವೆಂಬ ಬಿರುಗಾಳಿಯಿಂದ , ದೋಧೂಯಮಾನಂ = ಅದುರುತ್ತಿರುವ(ಕಂಪಿಸುತ್ತಿರುವ), ಭೀತಂ = ಹೆದರಿರುವ, ಪ್ರಪನ್ನಂ = ಶರಣು ಬಂದಿರುವ, (ನನ್ನನ್ನು) ಮೃತ್ಯೋಃ = ಇಂತಹ ಸಾವಿನಿಂದ, ಪರಿಪಾಹಿ = ಕಾಪಾಡು). ತಾತ್ಪರ್ಯ: ಪರಿಹರಿಸಲು ಆಗದಿರುವ ಸಂಸಾರವೆಂಬ ಜಂಜಡಗಳ ಕಾಳ್ಗಿಚ್ಚಿನಿಂದ ಬೆಂದು-ನೊಂದು ದುರದೃಷ್ಟವೆಂಬ ಬಿರುಗಾಳಿಯಿಂದ ಅದುರಿ-ಬೆದರಿ ನಿನ್ನಲ್ಲಿಯೇ ಶರಣು ಬಂದಿರುವ ನನ್ನನ್ನು ಈ ಸಂಸಾರವೆಂಬ ಸಾವಿನ ಮನೆಯಿಂದ ಕಾಪಾಡು; ಏಕೆಂದರೆ ಬೇರೆ ಯಾವ ಗುರುವನ್ನೂ ರಕ್ಷಕನನ್ನೂ ನಾನರಿಯೆನು . ವಿವರಣೆ: ಆತ್ಮಜ್ಞಾನವನ್ನು ಅರಸಿ ಬರುವ ಶಿಷ್ಯನು ಗುರುವಿನ ಮುಂದೆ ನಿವೇದಿಸಿಕೊಳ್ಳುತ್ತಾ ’ನಿಮ್ಮನ್ನು ಬಿಟ್ಟರೆ ಬೇರಾರೂ ನನಗೆ ದಾರಿ ತೋರುವವರಿ