ಪೋಸ್ಟ್‌ಗಳು

ವಿವೇಕ ಚೂಡಾಮಣಿ ಭಾಗ -೯

ಗ್ರಂಥದ ಮುಂದುವರಿದ ಭಾಗ अतो विचारः कर्तव्यो जिज्ञासोरात्मवस्तुनः | समासाध्य दयासिन्धुं गुरुं ब्रह्मविदुत्तमम् ||१५ ||  ಅತೋ ವಿಚಾರಃ ಕರ್ತವ್ಯೋ ಜಿಜ್ಞಾಸೋರಾತ್ಮವಸ್ತುನಃ | (=ಆತ್ಮವಿಚಾರ ಕರ್ತವ್ಯದ ಜಿಜ್ಞಾಸೆಗಾಗಿ ) ಸಮಾಸಾಧ್ಯ ದಯಾಸಿಂಧುಂ ಗುರುಂ ಬ್ರಹ್ಮವಿದುತ್ತಮಮ್ ||೧೫|| (= ಕರುಣಾಳುವೂ, ಬ್ರಹ್ಮಜ್ಞಾನಿಯೂ ಆಗಿರುವ ಗುರುವನ್ನು ಹೊಂದವುದು) ಆತ್ಮವಿದ್ಯೆಯ ಸಿದ್ಧಿಗಾಗಿ ಗುರುವಿನ ಬಳಿಗೆ ತೆರಳಬೇಕು ಎಂದು ಈ ಹಿಂದಿನ ಶ್ಲೋಕದಲ್ಲಿ ತಿಳಿದೆವು. ಇಂದಿನ ಕಾಲದಲ್ಲಿ ಗುರುಗಳೇನೋ ಸಾಕಷ್ಟು ಇರುವರು. ಗುರುಗಳ ಶಿಷ್ಯರೂ ಅಸಂಖ್ಯರಿದ್ದಾರೆ !. ಎಂತಹವರು ಗುರು ಎನ್ನಿಸಿಕೊಳ್ಳಲು ಅರ್ಹರಾಗುತ್ತಾರೆ ? ಎಂತಹ ಗುರುವಿನ ಶಿಷ್ಯರಾಗಿ ಆತ್ಮಾಭ್ಯಾಸವನ್ನು ಮೊದಲು ಮಾಡಬೇಕು? ಎಂಬ ’ಗೊಂದಲ’ಕ್ಕೆ ಶ್ರೀ ಶಂಕರರು ಮೇಲಿನ ಶ್ಲೋಕದ ಜೊತೆಗೆ ಮುಂದಿನ ಮೂರು ಶ್ಲೋಕಗಳ ಮೂಲಕ  ಪರಿಹಾರವನ್ನು ಒದಗಿಸುತ್ತಾರೆ. ಆಸಕ್ತನು ವಿಚಾರಾಧೀನನಾಗಿ ಆತ್ಮವಸ್ತುವಿನ ಜಿಜ್ಞಾಸೆಯೇ ತನ್ನ ಕರ್ತವ್ಯವೆಂದು ತಿಳಿದು ಯೋಗ್ಯ ಗುರುವನ್ನು ಹೊಂದಬೇಕು ಎಂದು ತಿಳಿಸುತ್ತಾರೆ. ’ದಯಾಸಿಂಧುಂ’ ಎಂದು ಹೇಳುವ ಮೂಲಕ ಅಧಿಕಾರಿಯು ಕರುಣೆಯ ಸಾಗರದಂತಿರಬೇಕು ಎಂದು ಸೂಚಿಸುತ್ತಾರೆ. ಜಾಣರಿಗೆ ಕಲಿಸುವುದು ಕಷ್ಟವೇನಲ್ಲ, ಆದರೆ ದಡ್ಡರಿಗೆ ತಾಳ್ಮೆಯಿಂದ ಮತ್ತು ಕರುಣೆಯಿಂದ ಹೇಳಿಕೊಡುವ ಅಧಿಕಾರಿಯು ಅಗತ್ಯ. ಒಂದು ಹನಿ ನೀರಿಗೂ ಸಮುದ್ರವು ಆಶ್ರಯವನ...

ವಿವೇಕ ಚೂಡಾಮಣಿ ಭಾಗ -೮

ಗ್ರಂಥದ ಮುಂದುವರಿದ ಭಾಗ अर्थस्य निश्चयो दृष्टो  विचारेण हितोक्तितः। न स्नानेन न दानेन प्राणायाम शतेनवा ॥१३॥ ಅರ್ಥಸ್ಯ ನಿಶ್ಚಯೋ ದೃಷ್ಟೋ ವಿಚಾರೇಣ ಹಿತೋಕ್ತಿತಃ| (= ಒಳ್ಳೆಯ ವಚನಗಳನ್ನು ಕೇಳಿ ವಿಚಾರಮಾಡುವುದರಿಂದಲೇ ಆತ್ಮಾರ್ಥ ನಿಶ್ಚಯವು) ನ ಸ್ನಾನೇನ ನ ದಾನೇನ ಪ್ರಾಣಾಯಾಮ ಶತೇನವಾ ||೧೨|| (=ಸ್ನಾನ, ದಾನ ಮತ್ತು ನೂರಾರು ಪ್ರಾಣಾಯಾಮಗಳಿಂದಲ್ಲ) ಸದ್ಗುರುಗಳಾದವರ ಒಳ್ಳೆಯ ಮಾತುಗಳನ್ನು , ಉಪದೇಶಗಳನ್ನು ಆಲಿಸುವುದರ ಜೊತೆಗೆ ಅಂತಹ ವಿಚಾರಗಳನ್ನು ಒರೆಗೆ ಹಚ್ಚಿ ತಿಳಿದುಕೊಂಡು ವಿವೆಚನೆಯಿಂದ ನಿರ್ಣಯಿಸಿಕೊಳ್ಳುವ ಆತ್ಮಾರ್ಥವು ಮಿಗಿಲಾದುದು. ಇಂತಹ ಆತ್ಮಾರ್ಥಜ್ಞಾನವು ಕೇವಲ ಸ್ನಾನ, ದಾನ ಮತ್ತು ನೂರಾರು ಬಾರಿ ಪ್ರಾಣಾಯಾಮಗಳನ್ನು ಮಾಡುವುದರಿಂದ ಸಿದ್ಧಿಸುವುದಿಲ್ಲ ಎಂದು ತಿಳಿಸುತ್ತಾರೆ. ಆಕ್ಷೇಪ : ’ವಸ್ತುಸಿದ್ಧಿರ್ವಿಚಾರೇಣ’ ಎಂದು ಈಗಾಗಲೇ ತಿಳಿದಿರುವುದರಿಂದ ಸದ್ಗುರುಗಳ ಆಪ್ತವಚನದ ಅಗತ್ಯವಿದೆಯೆ ? ಸಮಾಧಾನ :  ಹಗ್ಗವನ್ನೇ ಹಾವೆಂದು ತಿಳಿದು ಭ್ರಮೆಯಲ್ಲಿದ್ದಾಗ ವಾಸ್ತವದ ಅರಿವು ತಂತಾನೇ ಮೂಡುವುದು ಕಷ್ಟವಾಗುತ್ತದೆ. ಆಪ್ತರೊಬ್ಬರು ಹಿತವಾದ ಮಾತುಗಳಿಂದ ಸಂದರ್ಭವನ್ನು ವಿವರಿಸಿದಾಗ ಮನಸ್ಸು ತಿಳಿಯಾಗುತ್ತದೆ. ಭ್ರಮೆಯು ತೊಲಗುತ್ತದೆ. ಶ್ಲೋಕದ ಎರಡನೆಯ ವಾಕ್ಯವನ್ನು ಯೋಗಗುರು ’ಬಾಬಾ ರಾಮದೇವರು ’ ಗಮನಿಸಿದರೆ, ಬಹುಶಃ ಅವರಿಗೆ ಕಡುಕೋಪ ಬರಬಹುದು. ವೇದಾಂತದ ವಿಚಾರವೇ ಹಾಗೆ !. ಅ...

ವಿವೇಕ ಚೂಡಾಮಣಿ - ಭಾಗ ೭

ಗ್ರಂಥದ ಮುಂದುವರಿದ ಭಾಗ चित्तस्य शुद्धये कर्म न तु वस्तूपलब्धये । वस्तुसिद्धिर्विचरेण न  किञ्चित्   कर्मकोटिभिः ॥११॥  ಚಿತ್ತಸ್ಯ ಶುದ್ಧಯೇ ಕರ್ಮ ನ ತು ವಸ್ತೂಪಲಬ್ಧಯೇ | (=ಚಿತ್ತಶುದ್ಧಿಗಾಗಿ ಕರ್ಮ; ಆತ್ಮವಸ್ತು(ಜ್ಞಾನ)ವನ್ನು ಪಡೆಯಲು ಅಲ್ಲ) ವಸ್ತುಸಿದ್ಧಿರ್ವಿಚಾರೇಣ ನ ಕಿಂಚಿತ್ ಕರ್ಮಕೋಟಿಭಿಃ ||೧೧|| (=ವೈಚಾರಿಕತೆಯಿಂದ ಜ್ಞಾನ; ಕೋಟಿ ಕರ್ಮಾಚರಣೆಯಿಂದಲ್ಲ) ಕರ್ಮಗಳನ್ನು ಆಚರಿಸುವುದರಿಂದ ಮುಕ್ತಿಯಂತೂ ದೊರೆಯುವುದಿಲ್ಲ ಎಂದಾದಲ್ಲಿ ಅವುಗಳನ್ನು ಆಚರಿಸುವುದಾದರೂ ಏಕೆ ? ಎಂಬ ಪ್ರಶ್ನೆಗೆ ಮೇಲಿನ ಶ್ಲೋಕದ ಮೂಲಕ ಶಂಕರರು ಉತ್ತರವನ್ನು ತಿಳಿಸುತ್ತಾರೆ. ’ಚಿತ್ತಶುದ್ಧಿಗಾಗಿ ಕರ್ಮ’ ಎಂದು ಹೇಳುತ್ತಾರೆ. ಬುದ್ಧಿಗೆ ಆವರಿಸುವ ಭ್ರಮೆ ಅಥವಾ ಅಜ್ಞಾನವನ್ನು ತೊಡೆದುಹಾಕಲು ಕರ್ಮಗಳನ್ನು ಆಚರಿಸಬೇಕು ಎನ್ನುತ್ತಾರೆ. ಮೊದಲು ಅಜ್ಞಾನವನ್ನು ಕಳೆದುಕೊಂಡರೆ ಜ್ಞಾನದ ಮಾರ್ಗ ಯಾವುದು ಎಂದು ತಂತಾನೇ ಕಾಣಿಸುತ್ತದೆ. ಜ್ಞಾನಸಿದ್ಧಿಗೆ ಬೇಕಾಗುವ ಧೃಡತೆ, ಏಕಾಗ್ರತೆ, ಸಹಿಷ್ಣುತೆ ಇತ್ಯಾದಿಗಳು ಮಾಡುವ ಕರ್ಮದಿಂದ ನೆಲೆಗೊಳ್ಳುತ್ತವೆ ಮತ್ತು ಸಾಧನೆಯ ಹಾದಿಗೆ ದಾರಿದೀಪವಾಗುತ್ತದೆ. ಸಮಚಿತ್ತಕ್ಕಾಗಿ ಕರ್ಮವೇ ಹೊರತು ಆತ್ಮವಸ್ತುವನ್ನು ಅಥವಾ ಆತ್ಮಜ್ಞಾನವನ್ನು ಪಡೆಯಲು ಅಲ್ಲ ಎಂದು ಹೇಳುತ್ತಾರೆ. ಮೇರುಪರ್ವತವನ್ನು ಅಥವಾ ಎವರೆಸ್ಟ್ ಅನ್ನು ಏರಬೇಕೆನ್ನುವವರು ಅದಕ್ಕೆ ಬೇಕಾಗುವ ಎಲ್ಲಾ ಸಿದ್ಧತ...

ವಿವೇಕ ಚೂಡಾಮಣಿ -ಭಾಗ ೬

ಗ್ರಂಥದ ಮುಂದುವರಿದ ಭಾಗ अतो विमुक्यै प्रयतेत विद्वान् सन्यस्त बाह्यार्थ सुखस्पृहसन् | संतं महातं समुपेत्य देशिकं तेनोपदिश्टार्थ समाहितात्मा ||८|| ಅತೋ ವಿಮುಕ್ತ್ಯೈ ಪ್ರಯತೇತ ವಿದ್ವಾನ್ ಸನ್ಯಸ್ತ ಬಾಹ್ಯಾರ್ಥ ಸುಖಸ್ಪೃಹಸನ್ | ಸಂತಂ ಮಹಾತಂ ಸಮುಪೇತ್ಯ ದೇಶಿಕಂ ತೇನೋಪದಿಷ್ಟಾರ್ಥ ಸಮಾಹಿತಾತ್ಮಾ ||೮|| ದ್ರವ್ಯದಿಂದ, ವಿತ್ತದಿಂದ ಫಲದ ಮೇಲೆ ಬಯಕೆಗಳು ಉಂಟಾಗಿ ಜ್ಞಾನವರ್ಧನೆಗೆ ಅಡಚಣೆಯಾಗುವುದರಿಂದ ತಿಳುವಳಿಕೆಯುಳ್ಳವರು ಜ್ಞಾನಮಾರ್ಗದಿಂದಲೇ ಮುಮುಕ್ಷುತ್ವಕ್ಕೆ ಯತ್ನಿಸಬೇಕು ಎಂದು ಶ್ರೀ ಶಂಕರರು ಹೇಳುತ್ತಾರೆ. ಮೇಲಿನ ಶ್ಲೋಕದ ಅರ್ಥವನ್ನು ಗಮನಿಸೋಣ. ಅತೋ ವಿಮುಕ್ತ್ಯೈ ಪ್ರಯತೇತ ವಿದ್ವಾನ್ (= ವಿವೇಕಿಯು ಮುಕ್ತಿಗಾಗಿ ಯತ್ನಿಸಬೇಕು) ಸನ್ಯಸ್ತ ಬಾಹ್ಯಾರ್ಥ ಸುಖಸ್ಪೃಹಸನ್ (= ಬಾಹ್ಯ ಸುಖಗಳ ಆಸೆಯನ್ನು ಮೊದಲು ಬಿಡಬೇಕು) ಸಂತಂ ಮಹಾತಂ ಸಮುಪೇತ್ಯ ದೇಶಿಕಮ್ (=ಮಹಾತ್ಮರಾದ ಗುರುಗಳ ಸಂಗವನ್ನು ಹೊಂದಬೇಕು) ತೇನೋಪದಿಷ್ಟಾರ್ಥ ಸಮಾಹಿತಾತ್ಮಾ  (=ತನ್ನ ಇಷ್ಟಾರ್ಥ ಸಿದ್ಧಿಗಾಗಿ ಯತ್ನಿಸಬೇಕು) ಕರ್ಮದಿಂದ , ಸಂಪತ್ತಿನಿಂದ ಮುಕ್ತಿಯು ದೊರಕುವುದಿಲ್ಲವಾದ್ದರಿಂದ ತಿಳುವಳಿಕೆಯುಳ್ಳವನು (ವಿದ್ವಾನ್) ಮಹಾತ್ಮರಾದ ಗುರುಗಳ ಸಂಗವನ್ನು ಹೊಂದಿ ಅವರ ಉಪದೇಶ ತತ್ತ್ವಗಳನ್ನು ಅರಿತು ಹೊರಗಿನ ಕ್ಷಣಿಕವಾದ ವಿಷಯಗಳ ಬಗೆಗೆ ಆಸಕ್ತಿಯನ್ನು ಬಿಟ್ಟು ಆತ್ಮಸಾಕ್ಷಾತ್ಕಾರಕ್ಕಾಗಿ ಯತ್ನಿಸಬೇಕು ಎಂಬುದು ಮೇಲಿನ ಶ್ಲೋಕದ ತಿರುಳು. ...

ವಿವೇಕ ಚೂಡಾಮಣಿ ಭಾಗ -೫

 ಗ್ರಂಥದ ಮುಂದುವರಿದ ಭಾಗ पठन्तु    शास्त्राणि  यजन्तु   देवान् कुर्वन्तु   कर्माणि  भजन्तु  देवताः । आत्मैक्य बोधेन विना विमुक्ति- र्न सिध्यति ब्रह्म शतान्तरेपि  ॥६॥ ಪಠಂತು ಶಾಸ್ತ್ರಾಣಿ ಯಜಂತು ದೇವಾನ್ ಕುರ್ವಂತು ಕರ್ಮಾಣಿ ಭಜಂತು ದೇವತಾಃ| ಆತ್ಮೈಕ್ಯ ಬೋಧೇನ ವಿನಾ ವಿಮುಕ್ತಿ- -ರ್ನ ಸಿಧ್ಯತಿ ಬ್ರಹ್ಮ ಶತಾಂತರೇಪಿ ||೬|| ಮುಕ್ತಿಯ ಮಹತ್ವವನ್ನು ತಿಳಿಸುತ್ತಾ ಶ್ರೀ ಶಂಕರರು ಮುಂದೆ ಬಹಳ ದಿಟ್ಟವಾದ ಧೀರವಾದ ಘೋಷಣೆಯನ್ನು ಮಾಡುತ್ತಾರೆ. ಮೇಲಿನ ಶ್ಲೋಕದ ವಿವರಣೆಯನ್ನು ತಿಳಿಯುವುದರ ಮೂಲಕ ಆ ಉದ್ಘೋಷವೇನು ಎಂಬುದನ್ನು ಅರಿಯೋಣ. ಪಠಂತು ಶಾಸ್ತ್ರಾಣಿ (=ಶಾಸ್ತ್ರಗಳನ್ನು ಓದುವುದು) ,     ಯಜಂತು ದೇವಾನ್ (=ದೇವತೆಗಳನ್ನು ಪೂಜಿಸುವುದು) ಕುರ್ವಂತು ಕರ್ಮಾಣಿ (=ಕರ್ಮಗಳನ್ನು ಮಾಡುವುದು),  ಭಜಂತು ದೇವತಾ: (=ದೇವತೆಗಳನ್ನು ಸ್ತುತಿಸುವುದು) ಆತ್ಮ್ಯೆಕ್ಯ ಬೋಧೇನ ವಿನಾ ವಿಮುಕ್ತಿಃ (= ಆತ್ಮಜ್ಞಾನ(ಬ್ರಹ್ಮ ಸಾಕ್ಷಾತ್ಕಾರೆ) ವಿಲ್ಲದೆ ಮುಕ್ತಿಯಿಲ್ಲ)   ನ ಸಿಧ್ಯತಿ ಬ್ರಹ್ಮ ಶತಾಂತರೇಪಿ (= ನೂರು ಚತುರ್ಮುಖ ಬ್ರಹ್ಮರು ಆಗಿಹೋದರೂ ಸಿದ್ಧಿಸದು) "ಆರು ಶಾಸ್ತ್ರವ ಓದಿದರಿಲ್ಲ ನೂರಾರು ಪುರಾಣವ ಪಠಿಸಿದರಿಲ್ಲ" ಎಂಬ ದಾಸವಾಣಿಯನ್ನು ಕೇಳಿರುತ್ತೇವೆ.ಶಾಸ್ತ್ರಗ್ರಂಥಗಳನ್ನು ಓದುವುದರಿಂದ, ದೇವತೆಗಳನ...

ವಿವೇಕ ಚೂಡಾಮಣಿ -ಭಾಗ ೪

ಗ್ರಂಥದ ಮುಂದುವರಿದ ಭಾಗ. ॥दुर्लभं त्रयमेवैतद् दैवानुग्रहहेतुकम्। मनुष्यत्वं मुमुक्षुत्वम् महापुरुषसंश्र्यः ॥३||  ||ದುರ್ಲಭಂ ತ್ರಯಮೇವೈತದ್ ದೈವಾನುಗ್ರಹ ಹೇತುಕಮ್ |   ಮನುಷ್ಯತ್ವಂ ಮುಮುಕ್ಷುತ್ವಂ ಮಹಾಪುರುಷಸಂಶ್ರಯಃ || ೩||    ಈ ಲೋಕದಲ್ಲಿ ಸುಲಭವಾಗಿ ದೊರಕದ (ದುರ್ಲಭವಾದ) ವಿಷಯಗಳನ್ನು ತಿಳಿಸುತ್ತಾ ಶ್ರೀ ಶಂಕರರು ಇನ್ನೂ ಮಹತ್ತರವಾದ ವಿಚಾರವನ್ನು ಪ್ರಸ್ತಾವಿಸುತ್ತಾರೆ. ಮೇಲಿನ ಶ್ಲೋಕದ ಮೊದಲನೆಯ ಸಾಲನ್ನು ಗಮನಿಸೋಣ ದುರ್ಲಭಂ ತ್ರಯಮೈವತದ್ ದೈವಾನುಗ್ರಹ ಹೇತುಕಮ್  (ದುರ್ಲಭಂ =ಸುಲಭವಾಗಿ ದೊರಕದ, ತ್ರಯಮ್ =ಮೂರು, ದೈವಾನುಗ್ರಹ ಹೇತುಕಮ್ = ದೈವಾನುಗ್ರಹವೇ ಕಾರಣವಾಗಿರುವ ) ದೈವಾನುಗ್ರಹವೇ ಕಾರಣವಾಗಿರುವ ಮೂರು ಮುಖ್ಯ ದುರ್ಲಭವಾದ ಸಂಗತಿಗಳಿವೆ .  ಆ ಸಂಗತಿಗಳನ್ನು ಶ್ಲೋಕದ ಎರಡನೆಯ ಸಾಲಿನಲ್ಲಿ ಹೇಳಲಾಗಿದೆ. ಆ ಎರಡನೆಯ ಸಾಲಿನ ಮೊದಲನೆಯ ಸಂಗತಿಯನ್ನು ಗಮನಿಸೋಣ. ೧) ಮನುಷ್ಯತ್ವಮ್ (= ಮನುಜನಾಗಿರುವುದು) ಮಾನವ ಜೀವಿಯು 'ಮನುಷ್ಯ' ಎನಿಸಿಕೊಳ್ಳಲು ಆತನಿಗಿರಬೇಕಾದ ಕನಿಷ್ಠ ಅರ್ಹತೆಯೆಂದರೆ ಅದು ಮನುಷ್ಯತ್ವ !. ಕಾಡು ಪ್ರಾಣಿಗಳ ಗುಣವು ನಾಗರೀಕ ಮಾನವನ ಗುಣವಲ್ಲ. ಈ ಮೊದಲು ಹೇಳಿದಂತೆ ಮಾನವನಿಗೆ ಹೆಚ್ಚಿನ ಗುಣಗಳು ಸಂದಾಯವಾಗಿ ಬಂದಿದ್ದರೆ ಕೆಲವೊಂದನ್ನು ಸಂಪಾದಿಸಿಕೊಳ್ಳಬೇಕಾಗುತ್ತದೆ. ಗುಣ ಸಂಪಾದನೆಗೆ ಸ್ವಾನುಭವವೂ ದಾರಿಯಾಗಬಲ್ಲುದು ವೇದಾಂತಗಳ...

ವಿವೇಕ ಚೂಡಾಮಣಿ -ಭಾಗ ೩

ಪ್ರಕರಣ ಗ್ರಂಥದ ಆರಂಭ --------------------- जन्तूनां नरजन्म दुर्लभमतः पुंस्त्वं ततो विप्रता तस्माद्   वैदिकधर्ममार्गपरता विद्वत्वमस्मात् परम् । आत्मानात्मविवेचनं स्वनुभवो ब्रह्मात्मना संस्थितिः मुक्तिर्नो शतकोटिजन्मसु कृतैः पुण्यैर्विना लभ्यते ॥२॥ ಜಂತೂನಾಂ ನರಜನ್ಮ ದುರ್ಲಭಮತಃ ಪುಂಸ್ತ್ವಂ ತತೋ ವಿಪ್ರತಾ ತಸ್ಮಾದ್ವೈದಿಕ ಧರ್ಮಮಾರ್ಗಪರತಾ ವಿದ್ವತ್ವಮಸ್ಮಾತ್ ಪರಮ್ | ಆತ್ಮಾನಾತ್ಮವಿವೇಚನಂ ಸ್ವನುಭವೋ ಬ್ರಹ್ಮಾತ್ಮನಾ ಸಂಸ್ಥಿತಿಃ ಮುಕ್ತಿರ್ನೋ ಶತಕೋಟಿ ಜನ್ಮ ಸುಕೃತೈಃ ಪುಣ್ಯೈರ್ವಿನಾಲಭ್ಯತೇ ||೨|| ಗ್ರಂಥದ ಆರಂಭ ಶ್ಲೋಕವೇ ಚರ್ಚೆಗೀಡುಮಾಡುವಂತಹುದಾಗಿದೆ. ಸರಳವಾಗಿ ಈ ಸೂಕ್ತದ ಭಾವಾರ್ಥವನ್ನು ತಿಳಿಯುವುದಾದರೆ "ಪ್ರಾಣಿಗಳಿಗೆ ಮಾನವ ಜನ್ಮವು ದುರ್ಲಭ. ಅದರಲ್ಲಿ ಪುರುಷತ್ವ, ವಿಪ್ರತ್ವ, ಧರ್ಮಮಾರ್ಗ ಪರತ್ವ ಮತ್ತು ಶಾಸ್ತ್ರಾರ್ಥ ಜ್ಞಾನವು ಒಂದಕ್ಕಿಂತ ಒಂದು ಮಿಗಿಲಾದವುಗಳು ಮತ್ತು ಬೇಕೆಂದಾಗ ಸಿಗದಿರುವಂತಹವು. ಅದರಲ್ಲೂ ಅಳಿವು-ಉಳಿವುಗಳ ಅರಿವನ್ನು ತಿಳಿದು ಆತ್ಮಜ್ಞಾನವನ್ನು ಪಡೆಯುವುದು ಇನ್ನೂ ಮಿಗಿಲಾದುದು. ಇವೆಲ್ಲವೂ ನೂರುಕೋಟಿ ಜನ್ಮಗಳಲ್ಲಿ ಸಂಪಾದಿಸಿದ ಪುಣ್ಯಗಳಿಲ್ಲದೆ ದೊರೆಯಲಾರದು " . ದೊರಕದು ಮಾನವಜನ್ಮವದರೊಳು ದೊರಕದು ಪುರುಷತ್ವವು ಸಿಗದು ವಿಪ್ರತ್ವವದಕಿಂತ ಮಿಗಿಲು ಧರ್ಮದಾಯಿತ್ವವವು ದೊರಕದು ದಿಟದ ಮೇಲರಿಮೆ ತನ್ನ ತಾನರಿಯದೆ ಮು...